ನಟಿ ಶ್ರುತಿ ಹರಿಹರನ್ ಗರ್ಭಿಣಿಯಾಗಿದ್ದು ಚೊಚ್ಚಲ ಕಂದನ ನಿರೀಕ್ಷೆಯಲ್ಲಿದ್ದಾರೆ. ಸ್ವತಃ ಅವರೇ ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಇದೊಂದು ಹೊಸ ಪ್ರಯಾಣದ ಆರಂಭ ಕ್ಲಾರಿಟಿಗಿಂತ ಕೆಲವೊಮ್ಮೆ ಬ್ಲರ್ ಆಗಿರುವುದೆ ಉತ್ತಮ ಎಂದು ಬರೆದುಕೊಂಡು ತಮ್ಮ ಬೇಬಿ ಬಂಪ್‌ಗೆ ಸಂಬಂಧಿಸಿದ ಫೋಟೋವನ್ನು ಶೇರ್ ಮಾಡಿದ್ದಾರೆ.

ಶ್ರುತಿ ಮೊದಲು ರಾಮ್ ಕುಮಾರ್ ಜೊತೆ ರಿಲೇಷನ್ ಶಿಪ್ ನಲ್ಲಿರುವುದಾಗಿ ಹೇಳಿಕೊಂಡಿದ್ದರು. ಆದರೆ ಎಲ್ಲಿಯೂ ತಾವು ಮದುವೆಯಾಗಿರುವುದಾಗಿ ಹೇಳಿಕೊಂಡಿರಲಿಲ್ಲ. ಆದರೆ ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಮೀಟೂ ಆರೋಪ ಕೇಳಿ ಬಂದ ಸಂದರ್ಭದಲ್ಲಿ ದೂರು ನೀಡುವಾಗ ಮದುವೆಯಾಗಿದ್ದ ವಿಚಾರ ಬಹಿರಂಗವಾಗಿತ್ತು. 2017ರಲ್ಲೇ ಶ್ರುತಿ ಹರಿಹರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎನ್ನಲಾಗಿದೆ. ನಟಿ ಶ್ರುತಿ ಪತಿ ರಾಮ್ ಕುಮಾರ್ ಅವರು ಕೇರಳದಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿದ್ದಾರೆ. ಕಳರಿಪಯಟ್ಟು ಕಲವಿದರಾಗಿದ್ದು ಅಂತಾರಾಷ್ಟ್ರೀಯ ನೃತ್ಯ ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದಾರೆ. ಅರ್ಜು ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಅರ್ಜುನ್ ಈ ಆರೋಪಗಳನ್ನು ನಿರಾಕರಿಸಿದ್ದು, ಶ್ರುತಿ ವಿರುದ್ಧ 5 ಕೋಟಿ ರೂ.ಗಳ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ. ಪ್ರಕರಣ ಇನ್ನೂ ನಡೆಯುತ್ತಿದೆ.