ಜುಲೈ 4 ರಂದು ಪ್ರಜ್ವಲ್ ಅವರ ಹುಟ್ಟುಹಬ್ಬ ಇದ್ದು, ಈ ಬಾರಿ ಪ್ರಜ್ವಲ್ ತಮ್ಮ ಹುಟ್ಟುಹಬ್ಬವನ್ನು ಒಂದು ಒಳ್ಳೆಯ ಕೆಲಸ ಮಾಡುವ ಮೂಲಕ ಆಚರಿಸಲು ನಿರ್ಧಾರ ಮಾಡಿದ್ದಾರೆ. ಸರ್ಕಾರಿ ಶಾಲೆ ಉಳಿಸಿ ಆಂದೋಲನ ನಡೆಸುತ್ತಿರುವ ಒಂದು ಸಂಸ್ಥೆಯ ಜೊತೆಗೆ ಪ್ರಜ್ವಲ್ ಕೈ ಜೋಡಿಸಿದ್ದಾರೆ. ಉತ್ತರ ಕರ್ನಾಟಕದ ಒಂದು ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದಾರಂತೆ. ಹೀಗಾಗಿ ತಮ್ಮ ಹುಟ್ಟುಹಬ್ಬವನ್ನು ಶಾಲಾಮಕ್ಕಳಿಗೆ ಸಹಾಯ ಆಗುವಂತೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿ ವರ್ಷ ಅಭಿಮಾನಿಗಳು ಹುಟ್ಟುಹಬ್ಬದ ದಿನ ಕೇಕ್, ಹಾರ, ಕಟ್ ಔಟ್, ಫ್ಲೆಕ್ಸ್ ಗಳಿಗೆ ದುಡ್ಡು ಹಾಕುತ್ತಿದ್ದರು. ಆದರೆ, ಈ ಬಾರಿ ಅದನ್ನು ಬಿಟ್ಟು ಅದೇ ಹಣದಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ನೆಟ್ ಪುಸ್ತಕ, ಪೆನ್, ಪೆನ್ಸಿಲ್, ಜಾಮಿಟ್ರಿ ಬಾಕ್ಸ್ ನೀಡಿ ಎಂದು ಕೇಳಿಕೊಂಡಿದ್ದಾರೆ. ನಿಮ್ಮ ಊರಿನಲ್ಲಿ ಇರುವ ಸರ್ಕಾರಿ ಶಾಲೆಗೆ ಅಥವಾ ನಮಗೆ ನೆಟ್ ಬುಕ್ ನೀಡಿದರೂ ನಾವೇ ಅದನ್ನು ಸರ್ಕಾರಿ ಶಾಲೆಗೆ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಈ ಉತ್ತಮ ಕೆಲಸಕ್ಕೆ ಅಭಿಮಾನಿಗಳು ಕೂಡ ಮುಂದೆ ಬರಬೇಕು. ಒಂದು ಒಳ್ಳೆಯ ನಿಲುವನ್ನು ತೆಗೆದುಕೊಳ್ಳಿ ಮತ್ತು #SaveGovtSchools ಆಂದೋಲನಕ್ಕೆ ನಿಮ್ಮ ಬೆಂಬಲವನ್ನು ನೀಡಿ ಎಂದು ಕೇಳಿಕೊಂಡಿದ್ದಾರೆ.