ನಟಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್, ಕಾಲಿವುಡ್‌ನಲ್ಲಿ ಸಖತ್ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದ್ದಾರೆ. ಟಾಲಿವುಡ್ ನಲ್ಲಿ ಸ್ಟಾರ್ ನಟರ ಜೊತೆ ಅಭಿನಯಿಸುತ್ತಿರುವ ಇವರು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ.

ಸದ್ಯ ರಶ್ಮಿಕಾ ಅವರ ಕುರಿತು ಒಂದು ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ತಮ್ಮ ಮುಂದಿನ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಸಂಭಾವನೆಯನ್ನು ಹೆಚ್ಚು ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈವರೆಗೂ ಸಿನಿಮಾ ಒಂದಕ್ಕೆ ₹80 ಲಕ್ಷ ಸಂಭಾವನೆ ಪಡೆಯುತ್ತಿದ್ದ ರಶ್ಮಿಕಾ ಇದೀಗ ತಮ್ಮ ಸಂಭಾವನೆಯನ್ನು ಬರೋಬ್ಬರಿ 1 ಕೋಟಿಗೆ ಹೆಚ್ಚಿಸಿಕೊಂಡಿದ್ದಾರೆ. ಕಾಲಿವುಡ್ ನ ವಿಜಯ್ ಅವರ ಚಿತ್ರಕ್ಕೆ ಬರೋಬ್ಬರಿ 1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಬೇರೆ ಎಲ್ಲಾ ಚಿತ್ರಗಳನ್ನು ಬಿಟ್ಟು ಈ ಚಿತ್ರಕ್ಕೆ ಒಪ್ಪಿಕೊಂಡಿದ್ದಕ್ಕೆ ಚಿತ್ರತಂಡ 1 ಕೋಟಿ ಆಫರ್ ಮಾಡಿದೆ ಎನ್ನಲಾಗಿದೆ.

ಇದೀಗ ವಿಜಯ್ ದೇವರಕೊಂಡ ಜತೆಗಿನ ಎರಡನೇ ಸಿನಿಮಾ ಡಿಯರ್ ಕಾಮ್ರೇಡ್ ರಿಲೀಸ್‌ಗೆ ರೆಡಿಯಾಗಿದೆ. ಈ ಸಿನಿಮಾ ಕನ್ನಡದಲ್ಲೂ ರಿಲೀಸ್ ಆಗುತ್ತಿದ್ದು ಅಭಿಮಾನಿಗಳಲ್ಲಿ ಸಖತ್ ಕುತೂಹಲ ಮೂಡಿಸಿದೆ. ಹೀಗೆ ದಕ್ಷಿಣ ಭಾರತದಲ್ಲಿ ತನ್ನದೇ ಛಾಪು ಮೂಡಿಸಿರುವ ರಶ್ಮಿಕಾ ಬಾಲಿವುಡ್ ನಲ್ಲೂ ಅಭಿನಯಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ರಶ್ಮಿಕಾ ಬಾಲಿವುಡ್ ಗೆ ಪದಾರ್ಪಣೆ ಮಾಡುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಂದಿಲ್ಲ.